Friday, June 27, 2025

ಪೋಷಕರಿಗೆ ತಮ್ಮ ಮಕ್ಕಳು ತಮಗಿಂತ ಒಳ್ಳೆಯ ಮಟ್ಟಕ್ಕೆ ಬೆಳೆದು ನಿಲ್ಲಬೇಕು ಎಂಬ ಆಸೆ ಇರುವುದು ಸಹಜ

ಪೋಷಕರಿಗೆ ತಮ್ಮ ಮಕ್ಕಳು ತಮಗಿಂತ ಒಳ್ಳೆಯ ಮಟ್ಟಕ್ಕೆ ಬೆಳೆದು ನಿಲ್ಲಬೇಕು ಎಂಬ ಆಸೆ ಇರುವುದು ಸಹಜ. ಭಾರತದಲ್ಲಿಯೂ ಬಹುತೇಕ ಕೆಳವರ್ಗ ಹಾಗು ಮಧ್ಯಮವರ್ಗದ ಜನರು ತಮ್ಮ ಆದಾಯವನ್ನು ಲೆಕ್ಕಿಸದೆ ,ಮಕ್ಕಳನ್ನು ಉನ್ನತ ರೀತಿಯ ಶಿಕ್ಷಣವನ್ನು ಪಡೆಯಬೇಕೆಂಬ ಆಶಯದೊಂದಿಗೆ ಸರ್ಕಾರಿ ಶಾಲೆಗಳಿಗಿಂತ , ಖಾಸಗಿ ಶಾಲೆಗಳನ್ನೇ ಸೇರಬಯಸುತ್ತಾರೆ .

ಈ ಚಿಂತನೆಯು ಸಂಪೂರ್ಣವಾಗಿ ಬದಲಾಗಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಒಂದು ಬದಲಾವಣೆಯನ್ನು ತರುವ ಪ್ರಯತ್ನದಲ್ಲಿ ನಾವು ತೊಡಗಿದ್ದೇವೆ . ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗಾಗಿ ಹಲವಾರು ಪ್ರಯತ್ನಗಳು ನಡೆಯುತ್ತಿವೆ. ಈ ವಿಷಯವಾಗಿ ಯೋಚಿಸಿ, ಹೆತ್ತವರ ಹಾಗು ಮಕ್ಕಳ ಮನೋಭೂಮಿಕೆಯಲ್ಲಿ ಸರ್ಕಾರೀ ಶಾಲೆಗಳ ಪರ ಒಳ್ಳೆಯ ಅಭಿಪ್ರಾಯ ಮೂಡಿಸುವ ನೆಲೆಯಲ್ಲಿ ಶಾಲೆಗಳ ಆವರಣದ ಶುಚಿತ್ವ, ಮಕ್ಕಳಲ್ಲಿ ಈ ಪ್ರಕಾರವಾಗಿ ಚಿಂತನೆಯನ್ನು ಮೂಡಿಸಿ ದೇಶಾಭಿವೃದ್ಧಿಯ ಪರ ಪ್ರೋತ್ಸಾಹಿಸುವುದು , ಮುಂತಾಗಿ ಕಾರ್ಯಗಳನ್ನು ಮಾಡುತ್ತಿದ್ದೇವೆ .ಇಷ್ಟೇ ಅಲ್ಲದೆ ನಮ್ಮ ತಂಡವು ಸರ್ಕಾರದಿಂದ ಲಭ್ಯವಿರುವ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯಗಳ ಬಗ್ಗೆಯೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನೂ ಮಾಡುತ್ತಿದ್ದು ,ಬಡ ಕುಟುಂಬದಮಗಳಿಗೆ ಆರ್ಥಿಕ ಬೆಂಬಲವನ್ನು ಕೂಡ ನೀಡುತ್ತಿದೆ.

More from the blog

K. Annamalai – ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಣ್ಣಾಮಲೈ ಆಯ್ಕೆ..

ಅಣ್ಣಾ ಮಲೈಯವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಿದೆ. ಬಿಜೆಪಿಯಲ್ಲಿ ಅಣ್ಣಾ ಮಲೈ ಅವರು ಪಾಪ್ಯುಲರ್ ಆಗಿದ್ದು, ಯುವ ಕಾರ್ಯಕರ್ತರ ಮನಸ್ಸು ಗೆದ್ದಿರುವ ನಾಯಕನಾಗಿ ಮಿಂಚುತ್ತಿದ್ದಾರೆ. ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರಾಗಿದ್ದ ಇವರು...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...