ಬೆಂಗಳೂರು: ಕೊರೋನ ವೈರಸ್ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಮುಂದೂಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕೊರೋನ ಹಿನ್ನೆಲೆಯಲ್ಲಿ ಸಧ್ಯಕ್ಕೆ ಚುನಾವಣೆ ನಡೆಸುವುದು ಬೇಡ ಎಂಬ ಅಭಿಪ್ರಾಯ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ಇದೆ” ಎಂದರು.
ಚುನಾವಣೆ ಮುಂದೂಡುವ ಬಗ್ಗೆ ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ. ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ. ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ನೇಮಿಸಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ” ಎಂದು ಅವರು ತಿಳಿಸಿದರು.
